ಕೊಡಗಿನಲ್ಲಿ ಕೊಳೆತ ಮೊಟ್ಟೆ ವಿತರಣೆ: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಬೋಸರಾಜು ಸೂಚನೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯ ಕೆಲವೆಡೆ ಕೊಳೆತ ಮೊಟ್ಟೆ ವಿತರಣೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು, ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ವೆಂಕಟ ರಾಜ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿರುವ ಸಚಿವರು, ಬಾಣಂತಿಯರಿಗೆ ಪೌಷ್ಟಿಕಾಂಶ ದೊರಕಬೇಕೆನ್ನುವ ಉದ್ದೇಶದಿಂದ ಮೊಟ್ಟೆಗಳನ್ನು ನೀಡಲಾಗುತ್ತಿದೆ. ಆದರೆ, ಕೆಲವೆಡೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವುದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಈ ರೀತಿಯ ಬೇಜವಾಬ್ದಾರಿಯ ನಡವಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆದರೆ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!