ಹೊಸದಿಗಂತ ವರದಿ,ಹಾವೇರಿ:
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನೂಕಾಪುರ ತಾಂಡದ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವುದು ಕಂಡುಬoದಿದೆ.
ಕೊಳಕು ವಾಸನೆಯ ಮೊಟ್ಟೆಗಳನ್ನು ಗಮನಿಸಿದ ಪೋಷಕರಲ್ಲಿ ಆತಂಕ ಮೂಡಿದ್ದು ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಹೋಗದಂತೆ ಸೂಚಿಸಿದ್ದಾರೆ. ಈ ಹಿಂದೆಯೂ ಅನೇಕ ಬಾರಿ ಈ ಕುರಿತು ಸಂಭoಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಸಮಸ್ಯೆಗೆ ಪರಿಹಾರ ಲಭಿಸಿಲ್ಲ ಎನ್ನುತ್ತಾರೆ ಗ್ರಾಮಸ್ಥರು.