ಹೊಸದಿಗಂತ ವರದಿ ಸೋಮವಾರಪೇಟೆ :
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಟ್ಯಾಬ್ ಗಳನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ವಿತರಣೆ ಮಾಡಿದರು.
ತಾಲೂಕಿನಲ್ಲಿ 120 ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಫಲಾನುಭವಿಗಳಿದ್ದಾರೆ ಎಂದು ಗುರುತಿಸಲಾಗಿದ್ದು, ಶಾಸಕರ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ಹಂತವಾಗಿ 77 ಮಂದಿಗೆ ಟ್ಯಾಬ್ ವಿತರಿಸಲಾಯಿತು.
ಈ ಸಂದರ್ಭ ಹಿರಿಯ ಕಾರ್ಮಿಕ ನಿರೀಕ್ಷಕಿ ಕೆ.ಎನ್. ಲೀನಾ, ಸಿಬ್ಬಂದಿಗಳಾದ ದರ್ಶನ್, ಪವಿತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.