ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಸಮವಸ್ತ್ರ ವಿತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಉತ್ಸವ ನಡೆಸುತ್ತೀರಿ. ನಿಮಗೆ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುದಿಲ್ವಾ? ಎಂದು ಛೀಮಾರಿ ಹಾಕಿದ್ದ ಬೆನ್ನೆಲ್ಲೇ ರಾಜ್ಯ ಸರ್ಕಾರವು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಒಂದು ಜೊತೆ ಸಮವಸ್ತ್ರ ವಿತರಿಸುವುದಾಗಿ ಹೇಳಿದೆ.

ಈ ಕುರಿತಂತೆ ಇಂದು ಟ್ವಿಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2022-23) ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಈಗಾಗಲೇ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ ವಿತರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ (2023-24) ಆರಂಭದಲ್ಲೇ ಸಮವಸ್ತ್ರ ವಿತರಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ (1 ಜೊತೆ ಸಮವಸ್ತ್ರ) ಪೂರ್ಣಗೊಳಿಸಲಾಗಿದ್ದು, ಕಾರ್ಯಾದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!