ಹೊಸದಿಗಂತ ವರದಿ ಯಾದಗಿರಿ: 
ಜಿಲ್ಲೆಯ ಗುರಮಠಕಲ್ ಪಟ್ಟಣದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತ ಕೊನೆಗೂ ಅನುಮತಿ ನೀಡಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜನ್ಮ ಶತಾಬ್ಧಿ ಹಿನ್ನಲೆಯಲ್ಲಿ ಸಂಘದಿಂದ ಕಳೆದ ವಾರ ಪಥ ಸಂಚಲನ ನಡೆಸಲು ನಿರ್ಧರಿಸಲಾಗಿತ್ತು. ಈ ಬಗ್ಗೆ ತಹಸೀಲ್ದಾರರಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಇದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ ಎಂದಿದ್ದ ತಹಸೀಲ್ದಾರರು ಅನುಮತಿ ನಿರಾಕರಿಸಿದ್ದರು.
ಇದು ವಿವಾದಕ್ಕೆ ಎಡೆಮಾಡಿ ಕೊಟ್ಟಿತ್ತು. ಸಂಘದಿಂದ ಜಿಲ್ಲಾಡಳಿತಕ್ಕೆ ಮತ್ತೊಮ್ಮೆ ಅರ್ಜಿ ಸಲ್ಲಿಸಲಾಗಿದ್ದು, ಅ.31.ರಂದು ಪಥ ಸಂಚಲನ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ 10 ಷರತ್ತುಗಳನ್ನು ಹಾಕಿ ಅನುಮತಿ ನೀಡಿದೆ.

                                    