ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಡಿಕೇರಿ :
ಮಡಿಕೇರಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಬರೆ ಕುಸಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಎರಡನೇ ಮೊಣ್ಣಂಗೇರಿ, ಗಾಳಿಬೀಡು, ಕಾಲೂರು, ನಿಡುವಟ್ಟು, ಮೇಘತ್ತಾಳು, ಆವಂಡಿ, ಮಕ್ಕಂದೂರು, ಹೆಮ್ಮೆತ್ತಾಳು ಮತ್ತು ಉದಯಗಿರಿ ಮತ್ತಿತರ ಬರೆ ಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವರು ವೀಕ್ಷಿಸಿದರು.
ಈಗಾಗಲೇ ಮುಂಗಾರು ಆರಂಭವಾಗಿರುವುದರಿಂದ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಇತರರು ಇದ್ದರು.