ಪ್ರವಾಹಕ್ಕೆ ತುತ್ತಾಗುತ್ತಿರುವ ನಾಗನೂರ ಗ್ರಾಮಕ್ಕೆ ಜಿಲ್ಲಾಧಿಕಾರಿ, ಶಾಸಕ ಭೇಟಿ: ಪರಿಶೀಲನೆ

ಹೊಸ ದಿಗಂತ ವರದಿ, ಹಾವೇರಿ :

ಮಳೆಗಾಲದಲ್ಲಿ ಪ್ರತಿ ವರ್ಷ ಪ್ರವಾಹಕ್ಕೆ ತುತ್ತಾಗುತ್ತಿರುವ ನಾಗನೂರ ಗ್ರಾಮ ಸ್ಥಳಾಂತರ ಅವಶ್ಯವಾಗಿದೆ. ಶಾಶ್ವತ ಪರಿಹಾರ ಕಲ್ಪಿಸುವ ಹಿನ್ನಲೆಯಲ್ಲಿ ನಾನು ಹಾಗೂ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಸ್ಥಳಾಂತರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ನಾಗನೂರ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವಿಕ್ಷೀಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ 280 ಮನೆಗಳ ಪೈಕಿ 180 ಮನೆಗಳಿಗೆ ಪ್ರವಾಹಕ್ಕೆ ತುತ್ತಾಗಲಿವೆ. ಪ್ರತಿ ವರ್ಷ ಪ್ರವಾಹ ಬಂದಾಗ ನಿರಾಶ್ರಿತರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ-ವಸತಿ ವ್ಯವಸ್ಥೆ ಮಾಡಲಾಗುತ್ತಿತ್ತು. ಇದರಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಕಳೆದ ಸರ್ಕಾರಗಳು ಪ್ರವಾಹ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಸ್ಥಳಾಂತರದ ಬಗ್ಗೆ ಆಶ್ವಾನೆ ನೀಡಿ ಹೋಗುತ್ತಿದ್ದರು. ಗ್ರಾಮ ಸ್ಥಳಾಂತರದ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಗ್ರಾಮಸ್ಥರ ಶಾಶ್ವತ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದಾರೆ ಎಂದರು.

ಗ್ರಾಮಸ್ಥರು ಪ್ರವಾಹಕ್ಕೆ ತುತ್ತಾಗುವ ಜಾಗವನ್ನು ಸರ್ಕಾರಕ್ಕೆ ಬಿಟ್ಟುಕೊಡಬೇಕು ಹಾಗೂ ಸರ್ಕಾರ ಗುರುತಿಸುವ ಸ್ಥಳಕ್ಕೆ ಹೋಗಬೇಕು ಎಂದು ಮನವಿ ಮಾಡಿಕೊಂಡರು.

ಈ ಪ್ರದೇಶದಲ್ಲಿ ರೈತರು ವಾಸಮಾಡುವುದರಿಂದ ಅವರ ಕೃಷಿ ಉಪಕರಣಗಳು, ಬಣವೆ, ಜಾನುವಾರುಗಳಿಗೆ ಸರ್ಕಾರದ ಯೋಜನೆಗಳಲ್ಲಿ ಬಡವರಿಗೆ ನೀಡುವ ಮನೆಗಳ ವಿಸ್ತೀರ್ಣ ಸಾಕಾಗುವುದಿಲ್ಲ. ಹಾಗಾಗಿ ಹೆಚ್ಚಿನ ವಿಸ್ತೀರ್ಣನದ ನಿವೇಶನ ಬೇಕಾಗುತ್ತದೆ. ನಿವೇಶನಕ್ಕೆ ಬೇಕಾದ ಜಮೀನನ್ನು ನೀಡಲು ರೈತರು ಮುಂದೆ ಬಂದಿದ್ದಾರೆ ಹಾಗೂ ಸ್ಥಳಾಂತರಕ್ಕೂ ನಿವಾಸಿಗಳು ಒಪ್ಪಿದ್ದಾರೆ. ಈ ಕುರಿತಂತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಪ್ರತಿ ವರ್ಷ ಪ್ರವಾಹಕ್ಕೆ ತುತ್ತಾಗುವ ನಾಗನೂರ ಗ್ರಾಮ ಸ್ಥಳಾಂತಕ್ಕೆ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಗ್ರಾಮದ ಗ್ರಾಮದ 280 ಮನೆಗಳ ಪೈಕಿ ನದಿದಡದಲ್ಲಿ ಬರುವ ೧೮೦ ಮನೆಗಳಿಗೆ ನೀರು ನುಗ್ಗುತ್ತದೆ ಹಾಗಾಗಿ ಗ್ರಾಮ ಸ್ಥಳಾಂತರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆದ್ಯತೆ ಮೇರೆಗೆ ನಾಗನೂರ ಗ್ರಾಮ ಸ್ಥಳಾಂತರ ಮಾಡಲಾಗುವುದು. ಶಾಸಕರು ಈ ಕುರಿತಂತೆ ಮುಖ್ಯಮಂತ್ರಿಗಲೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ನಾಗನೂರ ಗ್ರಾಮದ ನದಿಪಾತ್ರದಲ್ಲಿ ಸದ್ಯ ಕಡಿಮೆ ಇದೆ. ರಾತ್ರಿ ವೇಳೆಯಲ್ಲಿ ನದಿ ದಡದಲ್ಲಿರುವ ಮನೆಯರಿಗೆ ಸ್ಥಳೀಯ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ಸಮಯದಲ್ಲಿ ರಾತ್ರಿ ಸಮಯದಲ್ಲಿ ಕಡ್ಡಾಯವಾಗಿ ಕಾಳಜಿ ಕೇಂದ್ರದಲ್ಲಿ ಉಳಿದು ಹಗಲು ವೇಳೆ ಅವರ ಮನೆಗೆ ಹೋಗುವ ವ್ಯವಸ್ಥೆ ಮಾಡಲಾಗಿದೆ. ಮನೆಗೆ ನೀರು ನುಗ್ಗುವ ಸಮಯದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು  ಎಂದರು.

ಮನೆಹಾನಿಗೆ ಹಾಗೂ ಬೆಳೆಹಾನಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಪರಿಹಾರ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಗಿರೀಶ ಸ್ವಾದಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿಲ್ಪಾ ಮುದ್ದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!