ಪ್ರಾಕೃತಿಕ ವಿಕೋಪಗಳಿಂದ ಅಪಾಯ ಸಾಧ್ಯತೆ ಇರುವ ಪ್ರದೇಶ ಗುರುತಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆ 

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ರೆಡ್ ಅಲರ್ಟ್ ಅವಧಿಯಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಅಪಾಯಗಳ ಬಗ್ಗೆ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ ತಿಳಿಸಬೇಕು. ಸಂಭಾವ್ಯ ಭೂಕುಸಿತ ಅನಾಹುತ ಸ್ಥಳಗಳನ್ನು ಗುರುತಿಸದೆ ಅನಾಹುತ ಸಂಭವಿಸಿದರೆ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಹೊಣೆಗಾರರನ್ನಾರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!