ಪರಿಶಿಷ್ಟ ಜಾತಿ- ಪಂಗಡ ಉಪ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಹೊಸದಿಗಂತ ವರದಿ ಮಡಿಕೇರಿ:

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ, ಫಲಾನುಭವಿಗಳ ಪಟ್ಟಿ ತಯಾರಿ ಸೇರಿದಂತೆ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಅನುಷ್ಠಾನದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಈಗಾಗಲೇ ಮೇ ತಿಂಗಳು ಪೂರ್ಣಗೊಳ್ಳುತ್ತಿರುವುದರಿಂದ ಎಸ್ಸಿಪಿಟಿ/ಟಿಎಸ್‍ಪಿ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಶೇಕಡಾವಾರು ಪ್ರಗತಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಣಮದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಪರಿಶಿಷ್ಟರಿಗೆ ಸರ್ಕಾರದ ಸೌಲಭ್ಯ ಕಡ್ಡಾಯವಾಗಿ ತಲುಪಿಸಬೇಕು ಎಂಬುದು ಸರ್ಕಾರದ ಬಯಕೆಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ತ್ವರಿತ ಕ್ರಮ ವಹಿಸಬೇಕು ಎಂದು ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!