ಚುನಾವಣೆ ಹಿನ್ನೆಲೆ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್​​ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆ ಹಿನ್ನೆಲೆ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್​​ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ ಎಂದು ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!