ಹೊಸದಿಗಂತ ವರದಿ, ಮಡಿಕೇರಿ
ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಸಮುದಾಯ ಬಾಂಧವರಿಗಾಗಿ ಜಿಲ್ಲಾ ಮಟ್ಟದ ‘ಬಂಟ್ಸ್ ಚಾಂಪಿಯನ್ಸ್ ಲೀಗ್’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಮಾ.18 ರಿಂದ 20ರ ವರೆಗೆ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್‍ನ ಸಹ ಕಾರ್ಯದರ್ಶಿ ಚಂದ್ರಶೇಖರ್ ರೈ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮಾ.18, 19 ಹಾಗೂ 20 ರಂದು ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾ ಕೂಟದಲ್ಲಿ 8 ತಂಡಗಳು ಭಾಗವಹಿಲಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ವಿನೂತನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು.
ಪಂದ್ಯಾವಳಿಯಲ್ಲಿ ಪ್ರಥಮ ವಿಜೇತ ತಂಡಕ್ಕೆ ರೂ.60,000 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ಪಡೆದ ತಂಡಕ್ಕೆ ರೂ.40,000 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಹಾಗೂ ನಾಲ್ಕನೇ ಬಹುಮಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಲಾಗುವುದೆಂದರು. ಹೆಚ್ಚಿನ ಮಾಹಿತಿ 9980001101, 9972477982 ಸಂಪರ್ಕಿಸುವಂತೆ ತಿಳಿಸಿದರು.
ಮಾ.18 ರಂದು ಬೆಳಗ್ಗೆ 9 ಗಂಟೆಗೆ ಮಡಿಕೇರಿಯ ಕೂರ್ಗ್ ಅರ್ಥ್ ಮೂವರ್ಸ್ ಮಾಲಕ ಬಿ.ಡಿ.ಜಗದೀಶ್ ರೈ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಯುವ ಬಂಟ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ವಂಸತ್ ರೈ ವಹಿಸಲಿದ್ದಾರೆ. ಮಾ.20 ರಂದು ಸಂಜೆ 4.30ಕ್ಕೆ ಸಮಾರೋಪ ನಡೆಯಲಿದ್ದು, ಪಿ.ಡ್ಲ್ಯು.ಡಿ. ಗುತ್ತಿಗೆದಾರ ಬಿ.ಕೆ.ರವೀಂದ್ರ ರೈ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಡಿಕೇರಿ ಕಾವೇರಿ ಅರ್ಥ್ ಮೂವರ್ಸ್ ಮಾಲಕ ಐತಪ್ಪ ರೈ ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಅಸೋಸಿಯೇಷನ್ ಅಧ್ಯಕ್ಷ ವಸಂತ್ ರೈ ಮಾತನಾಡಿ, ಯುವ ಬಂಟ್ಸ್ ಅಸೋಸಿಯೇಷನ್ ಕೇವಲ ಕ್ರೀಡಾ ಕೂಟಗಳಿಗೆ ಮಾತ್ರ ಸೀಮಿತವಾಗದೆ ವಿವಿಧ ಸಾಮಾಜಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷರಾದ ಶರತ್ ಶೆಟ್ಟಿ, ಸದಾನಂದ ರೈ, ಕಾರ್ಯದರ್ಶಿ ರೂಪಕ್ ರೈ, ಖಜಾಂಚಿ ಜಗನ್ನಾಥ್ ರೈ ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ