Thursday, August 18, 2022

Latest Posts

ಮಾ.10 ರಂದು ಜಿಲ್ಲಾ ಮಟ್ಟದ ಭಾಜಪಾ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸಭೆ

ಹೊಸದಿಗಂತ ವರದಿ, ಬಳ್ಳಾರಿ:

ಭಾರತೀಯ ಜನತಾ ಪಕ್ಷದ ಬಳ್ಳಾರಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಮಟ್ಟದ ಕಾರ್ಯಕಾರಿಣಿಯನ್ನು ಮಾ.10 ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿರಿವೇಲು ಇಬ್ರಾಹಿಂ (ಬಾಬು) ಅವರು ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ನಗರದ ಹೊಸಪೇಟೆ ರಸ್ತೆಯ ಗುರು ಫಂಕ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕಾರಿಣಿಯಲ್ಲಿ ಪಕ್ಷದ ವಿವಿಧ ಗಣ್ಯರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಅಧ್ಯಕ್ಷ ಮುಜಮ್ಮಿಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಸೈಯದ್ ಸಲಾಂ, ಉಪಾಧ್ಯಕ್ಷ ನೂರ್ ಭಾಷಾ, ಕಚೇರಿ ವ್ಯವಸ್ಥಾಪಕ ಸೈಯದ್ ಹಫೀಝರ‍್ರೆಹಮಾನ್, ಹಜ್ ಸಮಿತಿ ಸದಸ್ಯ ಮೈನುದ್ದೀನ್ ಮತ್ತು ರಾಜ್ಯ ಕಾರ್ಯದರ್ಶಿ ಶಾಹಿನಾ ಅಬ್ಬಾಸ್ ಅವರು ಸೇರಿದಂತೆ ಇತರೇ ಗಣ್ಯರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಸಂಸದರು, ಬಿಜೆಪಿಯ ವಿವಿಧ ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಕಾರ್ಯಕಾರಿಣಿಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಜಿಲ್ಲಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲಾಮಟ್ಟದ ಕಾರ್ಯಕಾರಿಣಿ ನಗರದಲ್ಲಿ ಆಯೋಜಿಸಿದ್ದೇವೆ, ಕೊರೋನಾ ಹಿನ್ನೆಲೆ ತಡವಾಯಿತು ಎಂದರು. ನಗರ ಶಾಸಕ ಜಿ ಸೋಮಶೇಖರ ರೆಡ್ಡಿ ಅವರು ಕಾರ್ಯಕಾರಿಣಿಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯ 11 ಮಂಡಲಗಳ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ನೀಲೇಶ್ ಜೈನ್, ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಭಾಷಾ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!