ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಭಾರೀ ವಾಹನಗಳ ಸಾಗಾಟವನ್ನು ನಿಷೇಧಿಸಿ ಕೊಡಗು ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಟಿಂಬರ್ ಲಾರಿಗಳ ಸಂಚಾರ ರಾಜಾರೋಷವಾಗಿ ನಡೆಯುತ್ತಿದೆ ಎಂದು ಸುಂಟಿಕೊಪ್ಪ ಭಾಗದ ಸಾರ್ವಜನಿಕರು ಆರೋಪಿಸಿದ್ದಾರೆ.
ರಾತ್ರಿ ವೇಳೆ ಭಾರೀ ಭಾರದ ವಾಹನಗಳ ಸಂಚಾರವಾಗುತ್ತಿದ್ದು, ಚೆಕ್ಪೋಸ್ಟ್ ಗಳಲ್ಲಿ ಸಂಚಾರವನ್ನು ನಿಯಂತ್ರಿಸಬೇಕು. ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದು, ಅನಾಹುತಗಳು ಸಂಭವಿಸುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.