spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿ|ಟಾಸ್ಕ್ ಫೋರ್ಸ್ ಸಭೆ: ಜಿಲ್ಲೆಗೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಯಾದಗಿರಿ:

ಪ್ರಸ್ತುತ ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿನ ಕೋವಿಡ್ 19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸದರಿ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರ ಸಂಬಂಧ ದಿನಾಂಕ 31.7.2021 ರಂದು ಸರ್ಕಾರ ಹೊರಡಿಸಿದ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಕೇರಳ ಮಹಾರಾಷ್ಟ್ರ ದಿಂದ ಬರುವವರು ಕೋವಿಡ್ 19 ಲಸಿಕೆಯ ಡೋಸ್ ಗಳನ್ನು ಪಡೆದಿದ್ದರೂ/ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ.
ವಿಮಾನ ರೈಲು ರಸ್ತೆ ಮಾರ್ಗ ಮತ್ತು ಇತರ ಸ್ವಂತ ವಾಹನಗಳ ಮುಖಾಂತರ ಆಗಮಿಸುವ ಪ್ರಯಾಣಿಕರಿಗೆ ಇದು ಅನ್ವಯವಾಗುತ್ತದೆ ಪ್ರಯಾಣಿಕರ ನೆಗೆಟಿವ್ ಪರೀಕ್ಷಾ ವರದಿಗಳನ್ನು ಖಚಿತಪಡಿಸಿಕೊಳ್ಳುವುದು ಆಯಾ ಪ್ರಾಧಿಕಾರಗಳ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದರು
ಯಾದಗಿರಿ ಜಿಲ್ಲೆಯಲ್ಲಿ ಸ್ಥಾಪಿಸಿದ 8 ಚೆಕ್ ಪೋಸ್ಟ್ ಗಳಾದ ಯರಗೋಳ ಮುಡಬೂಳ ಮಲ್ಲಾ (ಬಿ ) ತಿಂಥಣಿ ಗುರುಮಿಟಕಲ್ ಕುಂಟಿಮರಿ ನಾರಾಯಣಪುರ ಮಾಳನೂರ ಗಳಲ್ಲಿ ಪೊಲೀಸ್ ಆರೋಗ್ಯ ಕಂದಾಯ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ಮೂರು ಪಾಳೆಯಲ್ಲಿ ನಿಯೋಜಿಸಿ ದಿನದ 24 ಗಂಟೆ ಕಾರ್ಯನಿರ್ವಹಿಸಲು ತಿಳಿಸಿದರು. ಚೆಕ್‌ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಥರ್ಮಲ್ ಉಪಕರಣದಿಂದ ತಪಾಸಣಿ ಕೈಗೊಳ್ಳಬೇಕು. ಎಲ್ಲ ಚೆಕ್ ಪೋಸ್ಟ್ ಗಳು ಕಡ್ಡಾಯವಾಗಿ ಕಾರ್ಯೋನ್ಮುಖವಾಗುವಂತೆ
ಆಯಾ ತಾಲೂಕಿನ ತಹಶೀಲ್ದಾರರು ನೋಡಿಕೊಳ್ಳಬೇಕು. ಸಹಾಯಕ ಆಯುಕ್ತರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕೆಂದು ಹೇಳಿದರು. ಚೆಕ್ ಪೋಸ್ಟ್ ಗಳಲ್ಲಿ ನಿಯೋಜನೆಯಾದ ಸಿಬ್ಬಂದಿಗಳು ಸರಿಯಾಗಿ ಕೆಲಸ ನಿರ್ವಹಿಸಬೇಕು ಏನಾದರೂ ಲೋಪಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
ಬಸ್ ಮೂಲಕ ಪ್ರಯಾಣಿಸುವವರ ನೆಗೆಟಿವ್ ವರದಿಯನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾ ಬಸ್ ನಿರ್ವಾಹಕರದ್ದಾಗಿದೆ ಆ ಪ್ರಕಾರ ಕ್ರಮವಹಿಸುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.
ಸದರಿ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ವೇದಮೂರ್ತಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇಂದುಮತಿ ಇತರೆ ಇಲಾಖಾ ಅಧಿಕಾರಿಗಳು ಹಾಜರಿದ್ದರು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss