ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ: ಗಡಿಪಾರಿಗೆ ಆದೇಶ

ಹೊಸದಿಗಂತ ವರದಿ, ಉಡುಪಿ:

ತನ್ನದೇ ತಂಡವನ್ನು ಕಟ್ಟಿಕೊಂಡು ಅಕ್ರಮ ಜಾನುವಾರು ಸಾಗಟ, ಕಳ್ಳತನ ಸೇರಿದಂತೆ ಕ್ರಿಮಿನಲ್ ಚಟುವಟಿಕೆಯಲ್ಲಿ ಆರೋಪಿಯಾಗಿರುವ ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಗುಲ್ವಾಡಿ ಗ್ರಾಮದ ಕಾಂಡ್ಲಗದ್ದೆ ವಾಸಿ ಅಬ್ದುಲ್ ಬ್ಯಾರಿರವರ ಮಗ 4 ಅಬೂಬಕ್ಕರ್ (43) ಗಡಿಪಾರು ಮಾಡಿ ಕುಂದಾಪುರ ಉಪವಿಭಾಗಧಿಕಾರಿ ಕೆ.ರಾಜು ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣೆ ಸೇರಿದಂತೆ ಈತನ ವಿರುದ್ದ ವಿವಿಧ ಠಾಣೆಗಳಲ್ಲಿ 09 ಪ್ರಕರಣಗಳು ದಾಖಲಾಗಿರುತ್ತವೆ. ಆತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರವೂ ಕೂಡ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿರುತ್ತಾನೆ.

ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಈ ಬಗ್ಗೆ ಮೇಲಾಧಿಕಾರಿಯವರ ಆದೇಶದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಉಪನಿರೀಕ್ಷಕರು ಮಾನ್ಯ ದಂಡಾಧಿಕಾರಿಯವರು ಕುಂದಾಪುರ ಉಪವಿಭಾಗರವರಿಗೆ ಆತನ ವಿರುದ್ದ ಕರ್ನಾಟಕ ಪೊಲೀಸ್ ಕಾಯಿದೆ 1963 ಅಡಿಯಲ್ಲಿ ಗಡಿಪಾರು ಕ್ರಮ ತೆಗೆದುಕೊಳ್ಳುವಂತೆ ವರದಿಯನ್ನು ಪೊಲೀಸ್ ಅಧೀಕ್ಷಕರ ಮುಖಾಂತರ ಸಲ್ಲಿಸಿದ್ದರು.

ಈ ವರದಿಯನ್ನು ಪರಿಶೀಲಿಸಿ ಕುಂದಾಪುರ ಉಪವಿಭಾಗಧಿಕಾರಿ ಜು. 26 ರಂದು ಅಬೂಬಕ್ಕರ್ ಎಂಬಾತನಿಗೆ 6 ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ, ಜಮಖಂಡಿ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

6 ತಿಂಗಳ ಒಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ಕಾರಣಕ್ಕೂ ಕಂಡು ಬಂದಲ್ಲಿ ಕುಂದಾಪುರ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಅಬೂಬಕರ್ ನನ್ನು ದಸ್ತಗಿರಿ ಮಾಡುವಂತೆ ಆದೇಶವನ್ನು ಹೊರಡಿಸಿರುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!