October 9, 2026
Friday, October 9, 2026
spot_img

ಕೊಡಗಿನಲ್ಲಿ ಹೇಯ ಕೃತ್ಯ; ಅಪರಿಚಿತ ವ್ಯಕ್ತಿಯಿಂದ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಾಗಿ ಶೋಧ

ಹೊಸದಿಗಂತ ವರದಿ ಕೊಡಗು:  

ಕೊಡಗಿನ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ನಿಂತಿದ್ದ 9 ವರ್ಷದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

 ಶುಕ್ರವಾರ ಸುಮಾರು 9.30 ರ ಸಮಯದಲ್ಲಿ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಬಸ್ ನಿಲ್ದಾಣದ ಬಳಿಯಿರುವ ಮಾರ್ಕೆಟ್ ಬಳಿಯಿಂದ ಪುಸಲಾಯಿಸಿ ಕರೆದೊಯ್ದಿದ್ದಾನೆ. ಸಂಜೆಯ 4 ಗಂಟೆ ವೇಳೆಗೆ ಬಾಲಕಿಯನ್ನು ಮತ್ತೆ ಬಸ್ ನಿಲ್ದಾಣದ ಬಳಿ ಬಿಟ್ಟು ತೆರಳಿದ್ದಾನೆ. ಬಾಲಕಿಯ ತಂದೆ ಘಟನೆ ನಡೆದ ಸಂದರ್ಭ ಬಸ್ ನಿಲ್ದಾಣದಲ್ಲೇ ಇದ್ದು ಪಾನಮತ್ತನಾಗಿದ್ದ ಎಂದು ತಿಳಿದುಬಂದಿದೆ.

ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಾಲಕಿ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಹುಡುಕಾಟ ನಡೆಸಲಾಗಿತ್ತು. ಬಳಿಕ ಸಂಜೆ ಬಾಲಕಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದಾಳೆ. ಬಟ್ಟೆ ಹಾಗೂ ಊಟ ಕೊಡಿಸುವುದಾಗಿ, ದೊಡ್ಡವಳಾದ ಬಳಿಕ ಮದುವೆಯಾಗುವುದಾಗಿ ಪುಸಲಾಯಿಸಿ ವ್ಯಕ್ತಿಯೊಬ್ಬರು ತನ್ನನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸಂತ್ರಸ್ತ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:

ಪ್ರಕರಣ ದಾಖಲಿಸಿಕೊಂಡಿರುವ ಗೋಣಿಕೊಪ್ಪ ಪೊಲೀಸರು ತನಿಖೆ ಮುಂದುವರಿಸಿದ್ದು, ಬಾಲಕಿಯನ್ನು ಕರೆದೊಯ್ದ ವ್ಯಕ್ತಿಯ ಗುರುತು, ಆತನ ಚಲನವಲನ ಹಾಗೂ ಘಟನೆಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಸ್ಥಳೀಯ ಸಿಸಿ ಟಿವಿಯಲ್ಲಿ ಆರೋಪಿಯ ಚಿತ್ರ ಸೆರೆಯಾಗಿದ್ದು, ಇದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Must Read