‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಅಪ್ಪಚ್ಚು ರಂಜನ್

ಹೊಸ ದಿಗಂತ ವರದಿ, ಮಡಿಕೇರಿ :

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಉದ್ದೇಶಿತ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣ ಕಾರ್ಯಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.

ಹಾರಂಗಿ ವೃಕ್ಷೋದ್ಯಾನವನ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ಫಲಕ ಅನಾವರಣಗೊಳಿಸಿ, ಸಾಂಕೇತಿಕವಾಗಿ ಔಷಧಿಯ ಗಿಡಗಳನ್ನು ನೆಡುವ ಮೂಲಕ ಉದ್ದೇಶಿತ ಯೋಜನೆಗೆ ಚಾಲನೆ ನೀಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪಚ್ಚು ರಂಜನ್, ಔಷಧ ಉದ್ಯಾನ ನಿರ್ಮಾಣಕ್ಕೆ ಹಾರಂಗಿ ಉತ್ತಮ ಜಾಗ. ಔಷಧಿ ಸಸ್ಯಗಳನ್ನು ಉಳಿಸುವ ಕಾರ್ಯ ನಿರಂತರವಾಗಿ ಆಗಬೇಕು. ನಮ್ಮ ಪರಿಸರ ಉಳಿದರೆ ಮಾತ್ರ ಜೀವರಾಶಿಗಳು ಬದುಕಲು ಸಾಧ್ಯ ಎಂದರು.

ಕೊಡಗಿನಲ್ಲಿ ಪ್ರತಿ ಊರಿನಲ್ಲೂ ದೇವರ ಕಾಡುಗಳು ಇವೆ. ಹಿಂದಿನಿಂದಲೂ ಆ ಕಾಡುಗಳನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದೆ. ಈ ಕಾಡುಗಳಲ್ಲೂ ಅಪಾರ ಔಷಧೀಯ ಗಿಡಗಳು, ಜೀವ ವೈವಿಧ್ಯಗಳಿವೆ ಎಂದು ತಿಳಿಸಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ , ಹಾರಂಗಿ ಜಲಾಶಯ, ಆನೆ ಶಿಬಿರ, ವೃಕ್ಷೋದ್ಯಾನಕ್ಕೆ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಮುಂದಿನ ದಿನದಲ್ಲಿ ಔಷಧ ಉದ್ಯಾನ ಆದ ಬಳಿಕ ಪ್ರವಾಸಿಗರು ಅದರ ಲಾಭವನ್ನೂ ಪಡೆಯಬಹುದು. ಉದ್ಯಾನ ನಿರ್ಮಾಣದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಪಂಚಾಯಿತಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಗಮನ ಸೆಳೆದರು.

ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಜೀವ ವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಎಸ್. ಅರೇಕಲ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಂ ಬಾಬು, ಶರಣಬಸಪ್ಪ, ಎಂ.ಜೆ. ಗೋವರ್ಧನ್ ಸಿಂಗ್, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಲ್ಯಾಂಪ್ಸ್ ಅಧ್ಯಕ್ಷ ಚಂದ್ರು ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!