Wednesday, December 24, 2025

ರಾಯರ ಸನ್ನಿಧಿಯಲ್ಲಿ ‘ಡಿವೈನ್ ಸ್ಟಾರ್’: ಕುಟುಂಬ ಸಮೇತ ಮಂತ್ರಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿನಿಮಾ ಚಿತ್ರೀಕರಣದ ಬ್ಯುಸಿ ಶೆಡ್ಯೂಲ್ ನಡುವೆಯೂ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಧ್ಯಾತ್ಮದತ್ತ ಮುಖ ಮಾಡಿದ್ದಾರೆ. ನಿನ್ನೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದ ಅವರು, ಇಂದು ಕುಟುಂಬ ಸಮೇತರಾಗಿ ರಾಯಚೂರು ಜಿಲ್ಲೆಯ ಪವಿತ್ರ ಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿದರು.

ಪತ್ನಿ ಪ್ರಗತಿ ಶೆಟ್ಟಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆಗಮಿಸಿದ ರಿಷಬ್, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಗ್ರಾಮದೇವತೆ ಮಂಚಾಲಮ್ಮನ ದರ್ಶನ ಪಡೆದ ಕುಟುಂಬಸ್ಥರು ರಾಯರ ಮಠದಲ್ಲಿ ಕೆಲಕಾಲ ಕಳೆದರು.

ದರ್ಶನದ ನಂತರ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಗಳು ರಿಷಬ್ ಕುಟುಂಬಕ್ಕೆ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಮಂಗಳವಾರವಷ್ಟೇ ತಿರುಮಲ ಸನ್ನಿಧಾನಕ್ಕೆ ಭೇಟಿ ನೀಡಿದ್ದ ರಿಷಬ್, ಇಂದು ಮಂತ್ರಾಲಯಕ್ಕೆ ಬರುವ ಮೂಲಕ ಸತತವಾಗಿ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ.

error: Content is protected !!