ಕಟೀಲು ಶ್ರೀ ಕ್ಷೇತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ: ಕಾಂತಾರ 2 ಕುರಿತು ನೀಡಿದ್ರು ಅಪ್ ಡೇಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕುಟುಂಬದೊಂದಿಗೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಟ, ‘ಕಾಂತಾರ 2’ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಹಾಗಾಗಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ಫಿಲ್ಮ್ ಫೆಸ್ಟಿವಲ್‌ನಲ್ಲಿ ಡಿಸಿಎಂ ಡಿಕೆಶಿ ಕಲಾವಿದರಿಗೆ ನಟ್ಟು ಬೋಲ್ಟು ಟೈಟ್ ಮಾಡೋ ವಿವಾದಕ್ಕೆ ಪ್ರತಿಕ್ರಿಯಿಸಿ, ನಾನು ಚಿತ್ರದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!