ಡಿವೋರ್ಸ್‌ ಕೇಸ್‌ | ಗಂಡ-ಹೆಂಡತಿ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷಿಗೆ ಅರ್ಹ: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವಿಚ್ಛೇದನದ ವೇಳೆ ತನ್ನ ಸಂಗಾತಿ ತನ್ನೊಂದಿಗೆ ಮೊಬೈಲಿನಲ್ಲಿ ಮಾತನಾಡಿದ್ದನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಕಾಲ್ ರೆಕಾರ್ಡರ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ , ಸಂಗಾತಿಯ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದನ್ನು ಕೌಟುಂಬಿಕ ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಈ ರೀತಿಯ ಕಾಲ್ ರೆಕಾರ್ಡರ್​​ಗಳನ್ನು ಸಾಕ್ಷಿಯಾಗಿ ಪರಿಗಣಿಸುವುದರಿಂದ ದೇಶೀಯ ಸಾಮರಸ್ಯ ಮತ್ತು ವೈವಾಹಿಕ ಸಂಬಂಧಗಳಿಗೆ ಧಕ್ಕೆ ಉಂಟಾಗುತ್ತದೆ. ಇದು ತಮ್ಮ ಸಂಗಾತಿಗಳ ಮೇಲೆ ಕಣ್ಣಿಡುವಂತಹ ಪ್ರವೃತ್ತಿಯನ್ನು ಹೆಚ್ಚಿಸುತ್ತದೆ ಎಂಬ ವಾದ ಸಮರ್ಥನೀಯ ಎಂದು ನಾವು ಭಾವಿಸುವುದಿಲ್ಲ. ವಿವಾಹವು ಒಂದು ವೇಳೆ ಸಂಗಾತಿಗಳು ಪರಸ್ಪರ ಒಬ್ಬರ ಮೇಲೊಬ್ಬರು ಕಣ್ಣಿಡುವ ಹಂತವನ್ನು ತಲುಪಿದ್ದರೆ ಅಂತಹ ಸಂಬಂಧ ಮುಂದುವರೆಯುವುದರಲ್ಲಿ ಯಾವ ಅರ್ಥವೂ ಇಲ್ಲ. ಅದು ಮುರಿದ ಸಂಬಂಧದ ಲಕ್ಷಣವಾಗಿದೆ. ಅದು ಅವರ ನಡುವಿನ ನಂಬಿಕೆಯ ಕೊರತೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಭಟಿಂಡಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಈ ವಿಷಯವು ಹಿಂದೂ ವಿವಾಹ ಕಾಯ್ದೆ, 1955ರ ಸೆಕ್ಷನ್ 13ರ ಅಡಿಯಲ್ಲಿ ವಿಚ್ಛೇದನ ಪ್ರಕ್ರಿಯೆಗಳನ್ನು ಒಳಗೊಂಡಿತ್ತು. ಪತಿ ತನ್ನ ಪತ್ನಿಯ ಮೇಲೆ ಕ್ರೌರ್ಯದ ಆರೋಪ ಹೊರಿಸಿದ್ದರು. ಅವರು ತನ್ನ ಆರೋಪವನ್ನು ಸಾಬೀತುಪಡಿಸಲು ರೆಕಾರ್ಡ್ ಮಾಡಿದ ಫೋನ್ ಸಂಭಾಷಣೆಗಳನ್ನು ಉಲ್ಲೇಖಿಸಿದ್ದರು. ಆದರೆ, ಕೌಟುಂಬಿಕ ನ್ಯಾಯಾಲಯವು ಈ ರೆಕಾರ್ಡಿಂಗ್‌ಗಳಿರುವ ಸಿಡಿಯನ್ನು ಸಾಕ್ಷಿಯಾಗಿ ಪರಿಗಣಿಸಲು ಅನುಮತಿಸಿತ್ತು. ತನ್ನ ಗಂಡ ರಹಸ್ಯವಾಗಿ ಕಾಲ್ ರೆಕಾರ್ಡ್ ಮಾಡಿದ್ದಾನೆ. ಅದನ್ನು ಪರಿಗಣಿಸಬಾರದು ಎಂದು ಪತ್ನಿ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ್ದರು. ನನ್ನ ಒಪ್ಪಿಗೆಯಿಲ್ಲದೆ ಕಾಲ್ ರೆಕಾರ್ಡ್ ಮಾಡಲಾಗಿದೆ. ಅವುಗಳನ್ನು ಸಾಕ್ಷಿಯಾಗಿ ಸ್ವೀಕರಿಸುವುದು ನನ್ನ ಗೌಪ್ಯತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದರು. ಆಕೆಯ ವಾದವನ್ನು ಒಪ್ಪಿದ್ದ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತ್ತು. ಈ ತೀರ್ಪನ್ನು ಪತಿ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!