ದಿವ್ಯಾ ಹಾಗರಗಿಯನ್ನು ಸಿಐಡಿ ಕಚೇರಿಗೆ ಹಾಜರುಪಡಿಸಿದ ಪೊಲೀಸರು

ಹೊಸದಿಗಂತ ವರದಿ, ಕಲಬುರಗಿ
ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಅಕ್ರಮದ ರೂವಾರಿ, ಪಿಎಸ್ಐ ಪರೀಕ್ಷಾ ಕೇಂದ್ರವಾದ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ ದಿವ್ಯಾ ಹಾಗರಗಿಯನ್ನು 11-45ಕ್ಕೆ ಕಲಬುರಗಿ ಸಿಐಡಿ ಕಚೇರಿಗೆ ಕರೆ ತರಲಾಯಿತು.
ತಡರಾತ್ರಿ ಮಹಾರಾಷ್ಟ್ರ ದ ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ದಿವ್ಯಾ ಹಾಗರಗಿಯನ್ನು ಬಂಧಿಸಿದ್ದರು. ಆರೋಪಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬಳಿಕ ಸಿಐಡಿ ಅಧಿಕಾರಿಗಳು ತಮ್ಮ ಕಸ್ಟಡಿ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳು ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!