ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಕೂಡಾ ದೀಪಾವಳಿ ಆಚರಣೆ ನಡೆದಿದೆ. ಶ್ವೇತಭವನದಲ್ಲಿ ನಡೆದ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಪ್ರಥಮ ಮಹಿಳೆ ಡಾ.ಜಿಲ್ ಬಿಡೆನ್ ಹಾಗೂ ಭಾರತೀಯ ಮೂಲದ ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಭಾಗವಹಿಸಿ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡಾ ಆಯೋಜನೆ ಮಾಡಲಾಗಿದ್ದು, 200ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಭಾಗವಹಿಸಿದ್ದರು.