ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ನರಕ ಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ ಎಂದು ಸಲಹೆ ನೀಡಿದ್ದಾರೆ. ಎಳೆ ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಜಾಗ್ರತೆ ವಹಿಸಿ. ದೀಪಾವಳಿಯನ್ನು ಸಂಭ್ರಮದಿಂದ ಸುರಕ್ಷಿತವಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಬ್ಬವೂ ಪ್ರತಿಯೊಬ್ಬರಿಗೂ ಶುಭವನ್ನು ಉಂಟು ಮಾಡಲಿ ಎಂದು ಹಾರೈಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಈ ಹಬ್ಬವೂ ಎಲ್ಲರಿಗೂ ಶುಭವನ್ನೇ ಉಂಟು ಮಾಡಲಿ ಎಲ್ಲರ ಮನ ಮನೆಗಳಲ್ಲಿ ಬೆಳಕು ತುಂಬಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ: ಸಿದ್ದರಾಮಯ್ಯ, ಡಿಕೆಶಿ, ಎಚ್ಡಿಕೆ ಸಹಿತ ಗಣ್ಯರಿಂದ ಶುಭಾಶಯ, ಸುರಕ್ಷತೆಯ ಕಿವಿಮಾತು
