Wednesday, October 22, 2025

ದೀಪಾವಳಿ ಹಬ್ಬ: ಬೆಂಗಳೂರು – ಮಂಗಳೂರು ನಡುವೆ ಎರಡು ವಿಶೇಷ ರೈಲುಗಳು ಸಂಚಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ಬೆಂಗಳೂರು ಮಂಗಳೂರು ನಡುವೆ 2 ವಿಶೇಷ ರೈಲುಗಳು ಸಂಚಾರ ನಡೆಸಲಿವೆ.

ನೈರುತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ ಬೆಂಗಳೂರು ಮಂಗಳೂರು ಜಂಕ್ಷನ್ ವಿವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್ ಸಂಚಾರ ನಡೆಸಲಿದೆ.

ಹುಬ್ಬಳ್ಳಿ ಮಂಗಳೂರು ವಿಶೇಷ ರೈಲು ವೇಳಾಪಟ್ಟಿ ಏನು?
ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು ಮಧ್ಯಾಹ್ನ 2:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಯಶವಂತಪುರ – ಮಂಗಳೂರು ವಿಶೇಷ ರೈಲು
ಯಶವಂತಪುರ – ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ಅಕ್ಟೋಬರ್ 19 ರಂದು ಮಧ್ಯರಾತ್ರಿ 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ 2 ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.

error: Content is protected !!