ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ದೀಪಾವಳಿ ಹಬ್ಬ ರಾಜ್ಯ ಸರ್ಕಾರದಲ್ಲಿ ದೊಡ್ಡ ಧಮಾಕವನ್ನು ಸೃಷ್ಟಿ ಮಾಡಲಿದೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸದ್ಯ ರಾಜ್ಯ ರಾಜಕೀಯದಲ್ಲಿ ಕುರ್ಚಿ ಸದ್ದು ಬಹಳ ಜೋರಾಗಿ ಕೇಳುತ್ತಿದೆ. ಇನ್ನೇನು ಸಿಎಂ ಬದಲಾವಣೆ ನಿಶ್ಚಿತ ಎಂದು ವಿಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದು, ಸಿಎಂ ಕುರ್ಚಿ ಬಿಡಲಿಲ್ಲ ಅಂದರೆ ದೀಪಾಳಿ ಧಮಾಕಾ ಫಿಕ್ಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಸಿಎಂ ಡಿಸಿಎಂ ನಡುವೆ ಕುರ್ಚಿ ಕಾಳಗ ನಡೆಯುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಂತರೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುದ್ದ ನಿಲೋದಿಲ್ಲ. ರಾಜ್ಯದ ಜನರಿಗೆ ದೀಪಾಳಿಯ ಧಮಾಕ ಫಿಕ್ಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ.