ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಾಂತ್ಯ ಮತ್ತು ದೀಪಾವಳಿ ಒಟ್ಟಿಗೆ ಬಂದಿವೆ. ಈ ಸಮಯದಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ 2,500 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.
ಅ.17ರಿಂದ ನ.20ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಕೋಯಿಕ್ಕೋಡ್, ತಿರುಪತಿ, ವಿಜಯವಾಡ, ಹೈದರಾಬಾದ್ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

