Sunday, March 7, 2021

Latest Posts

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಎನ್​ಐಎ ಸಲ್ಲಿಸಿದ ಚಾರ್ಜ್​ಶೀಟ್ ನಲ್ಲಿ ಏನಿದೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ಗಲಭೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಫೆ. 10ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚಾರ್ಜ್​ಶೀಟ್ ಲಭ್ಯವಾಗಿದೆ.
ಫೆ. 10ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಎನ್ಐಎ 7 ಸಾವಿರ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಗಲಭೆಯಲ್ಲಿ ಇದೂವರೆಗೆ 247 ಮಂದಿ ಆರೋಪಿಗಳ ಬಂಧನವಾಗಿದ್ದು, ಈ ಪೈಕಿ 40ಕ್ಕೂ ಅಧಿಕ ಗಲಭೆಕೋರರು ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್​​​ಡಿಪಿಐ) ಸಂಘಟನೆಯ ಸದಸ್ಯರಾಗಿದ್ದಾರೆ. ಫೈರೋಜ್ ಪಾಶಾ, ಮೊಹಮ್ಮದ್ ಶರೀಫ್, ಮುಜಾಮಿಲ್ ಪಾಶಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಈ ದಾಳಿಯನ್ನು ಆರೋಪಿಗಳು ಮೊದಲೇ ಸಂಚು ರೂಪಿಸಿದ್ದು, ಕೃಷ್ಣ ಜನ್ಮಾಷ್ಟಮಿ ದಿನವನ್ನು ಟಾರ್ಗೆಟ್​ ಮಾಡಿದ್ದರು. ಇದೇ ವೇಳೆ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿ ನವೀನ್, ಫೇಸ್​ಬುಕ್​ನಲ್ಲಿ ಅವಹೇಳಕಾರಿಯಾಗಿ ಪೋಸ್ಟ್ ಮಾಡಿದ್ದ. ಈ ಪರಿಸ್ಥಿತಿಯನ್ನೇ ಸದುಪಯೋಗಪಡಿಸಿಕೊಂಡ ಆರೋಪಿಗಳು, ಗಲಭೆ ಎಬ್ಬಿಸಿದ್ದರು ಎಂದು ಉಲ್ಲೇಖಿಸಲಾಗಿದೆ.
ಪ್ರತಿಭಟನಾಕಾರರು ಫೇಸ್​​ಬುಕ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಗಲಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಚೋದನೆ ಮಾಡಿದ್ದರಿಂದ ಹೊರಗಿನಿಂದ ಜನ ಸೇರಲು ಕಾರಣವಾಯಿತು.
ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಒಗ್ಗೂಡಿಸಿದ್ದ ಕಾರ್ಯಕರ್ತರು, ಗಲಭೆ ಎಬ್ಬಿಸಿದ್ದಾರೆ. ಪೊಲೀಸ್​​ ಠಾಣೆಗಳ ಮೇಲಿನ ದಾಳಿಗೆ ಪ್ರೇರಣೆಯಾಗಿದ್ದೂ ಸಹ ಸಾಮಾಜಿಕ ಜಾಲತಾಣವಾಗಿದೆ ಎಂದು ಎನ್‌ಐಎ ಸಲ್ಲಿಸಿದ ಚಾರ್ಜ್​ಶೀಟ್​​ನಲ್ಲಿ ಪ್ರಮುಖ ಅಂಶಗಳಾಗಿ ಉಲ್ಲೇಖಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss