ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದೆ ಅದಕ್ಕಾಗಿ ಏನು ಬೇಕಾದರೂ ಮಾಡಬಲ್ಲರು, ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ಅವರು ತಮ್ಮ ಬಳಿ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಶಾಸಕ ನರಸಿಂಹ ನಾಯಕ್ (ರಾಜು ಗೌಡ) ಹೇಳಿದರು.
ಯಾದಗಿರಿಯಲ್ಲಿ ಸುದ್ದಿಗೋಷ್ಟಿಯೊಂದರಲ್ಲಿ ಮಾತನಾಡಿದ ಅವರು, ಮುಂದೊಂದು ದಿನ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿ, ಅದರ ವಿಡಿಯೋ ಬಿಡುಗಡೆ ಮಾಡಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಸಾಧ್ಯತೆ ಇದೆ ಎಂದು ಹೇಳಿದರು.ಡಿಕೆ ಸಹೋದರರ ಜೊತೆ ಹೆಚ್ಚು ಒಡನಾಟ ಇಟ್ಟುಕೊಳ್ಳುವುದು ಬೇಡ ಅಂತ ಸಿದ್ದರಾಮಯ್ಯವನವರಿಗೆ ತಾನು ಸಲಹೆ ನೀಡಬಯಸುವುದಾಗಿ ರಾಜುಗೌಡ ಹೇಳಿದರು.
ರಾಹುಲ್ ಗಾಂಧಿಗೆ ಇದೇ ಭಯವಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮತ್ತು ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಬಹುದು ಎಂದು ಹೇಳಿದರು.