ದ.ಕ. ಜಿಲ್ಲಾ ಪಂಚಾಯತ್‌ಗೆ ದೀನ್ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಪ್ರಶಸ್ತಿ

ಹೊಸದಿಗಂತ ವರದಿ, ಮಂಗಳೂರು:

ಉತ್ತಮ ಅಭಿವೃದ್ಧಿ ಕಾರ್ಯಗಳ ಜೊತೆಗೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ೨೦೨೨ನೆಯ ಸಾಲಿನ `ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರ’ (ಡಿಡಿಯುಎಸ್‌ಪಿ) ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದೆ.
ಪಂಚಾಯತ್ ರಾಜ್ ದಿನವಾದ ಏ.೨೪ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆ ಈ ಪ್ರಶಸ್ತಿಯನ್ನು ನೀಡುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆದ ಉತ್ತಮ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಜಿಲ್ಲೆಯನ್ನು ಗುರುತಿಸಿ ಗೌರವಿಸಿದೆ. ಜಿಲ್ಲಾ ಪಂಚಾಯತ್‌ನ ಪ್ರತಿ ಇಲಾಖೆಗಳ ಮೂಲಕ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಇದೀಗ ಉತ್ತಮ ಸಾಧನೆಗಾಗಿ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿಗೆ ಜಿಲ್ಲೆ ಪಾತ್ರವಾಗಿರುವುದು ಖುಷಿ ತಂದಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!