ಹೊಸದಿಗಂತ ವರದಿ, ಮಂಗಳೂರು:
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಮಂಗಳೂರಿನ ಕೇಂದ್ರ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಟೀಮ್ ಹೊಸದಿಗಂತವು ಭರ್ಜರಿ ಸಾಧನೆಯನ್ನು ದಾಖಲಿಸಿದೆ.
ಕ್ರಿಕೆಟ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಹಾಗು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಗೊಂಡಿದೆ.
ಕ್ರೀಡಾಕೂಟದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಫೈನಲ್ ನಲ್ಲಿ ಪ್ರೆಸ್ ಇಲೆವೆನ್ ತಂಡ ವಿಜೇತರಾದರೆ, ಹೊಸದಿಗಂತ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿತು.
ವಿಧಾನ ಪರಿಷತ್ ನೂತನ ಸದಸ್ಯ ಮಂಜುನಾಥ್ ಭಂಡಾರಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಈ ವೇಳೆ ವಿವಿಧ ಗಣ್ಯರು ಉಪಸ್ಥಿತರಿದ್ದರು.