spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದ.ಕ ಜಿಲ್ಲೆಯ ನೀರು ಪರೀಕ್ಷಾ ಪ್ರಯೋಗಾಲಯಕ್ಕೆ ಎನ್‌ಎಬಿಎಲ್ ಮಾನ್ಯತೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯ ನೀರು ಪರೀಕ್ಷಾ ಪ್ರಯೋಗಾಲಯ ಎನ್‌ಎಬಿಎಲ್(ನ್ಯಾಷನಲ್ ಎಕ್ರೆಡೇಶನ್ ಬೋರ್ಡ್ ಆಫ್ ಟೆಸ್ಟಿಂಗ್
ಆಂಡ್ ಕ್ಯಾಲಿಬ್ರೇಶನ್ ಲ್ಯಾಬೋರೇಟರೀಸ್) ಮಾನ್ಯತೆಯನ್ನು ಪಡೆದ ರಾಜ್ಯದ ಮೊದಲ ನೀರು ಪರೀಕ್ಷಾ ಪ್ರಯೋಗಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಂಡು ನೀರನ್ನು ಸರಬರಾಜು ಮಾಡಬೇಕಾಗಿರುತ್ತದೆ. ಈ ಸಂಬಂಧವಾಗಿ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ 1998ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಯೋಗಾಲಯವನ್ನು ಸ್ಥಾಪಿಸಲಾಗಿತ್ತು.
ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯಗಳಿಗೆ ಭಾರತ ಸರ್ಕಾರದ ಜಲಜೀವನ್ ಮಿಷನ್‌ನ ಮಾರ್ಗಸೂಚಿ ಪ್ರಕಾರ ಎನ್‌ಎಬಿಎಲ್ ಮಾನ್ಯತೆಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ದ.ಕ. ಜಿಲ್ಲಾ ಪಂಚಾಯತ್ ಸರಕಾರದ ಎಲ್ಲಾ ನಿಯಮಗಳನ್ನು ಪಾಲಿಸುವುದರೊಂದಿಗೆ ಪ್ರಯೋಗಾಲಯ ಆರಂಭಿಸಿ ರಾಜ್ಯದಲ್ಲಿಯೇ ಮೊದಲ ಜಿಲ್ಲೆಯಾಗಿ ಮೂಡಿಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss