ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣದಲ್ಲಿ ಮಂಗಳಸೂತ್ರವನ್ನು ತೊಡೆದುಹಾಕುವ ಬಗ್ಗೆ ಮಾತನಾಡಿದ್ದಾರೆ. ಮಂಗಳಸೂತ್ರ ಕಿತ್ತುಕೊಂಡವರು ಯಾರೋ ಗೊತ್ತಿಲ್ಲ. ಆದರೆ, ಪ್ರಧಾನಿ ಮೋದಿ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡಬಾರದಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿರುವ ಅವರು, ಬುಧವಾರ ಪ್ರಿಯಾಂಕಗಾಂಧಿ ಜೊತೆಗೆ ಚುನಾವಣಾ ಪ್ರಚಾರ ನಡೆಸಿದ್ದಾರೆ. ಪ್ರಚಾರದ ಬಳಿಕ ಇಂದು ಲಕ್ನೋದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿತ್ತು. ಆದರೆ ಆದಾಯವು ಎಲ್ಲಿ ದ್ವಿಗುಣಗೊಳ್ಳುತ್ತದೆ ಎಂದು ನಾನು ಕೇಳಲು ಬಯಸುತ್ತೇನೆ? ನಮ್ಮ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. 60,000 ಹುದ್ದೆಗಳಿಗೆ 60 ಲಕ್ಷ ಅರ್ಜಿ ಸಲ್ಲಿಸಿದ್ದಾರೆ.
ಇದು ನಿರುದ್ಯೋಗ ಸಮಸ್ಯೆಯ ತೀವ್ರತೆ ತೋರುತ್ತದೆ. ನಿಮ್ಮ ಭಾಗದ ಯುವಕರು ದೇಶದ ಬೇರೆ ಬೇರೆ ಭಾಗಕ್ಕೆ ಉದ್ಯೋಗ ಅರಸಿ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.