ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 17 ನೇ ಬಜೆಟ್ ಮಂಡಿಸಿದ್ದು, ಕಾಂಗ್ರೆಸ್ ಪಲಾಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಇದರ ನಡುವೆ ‘ಕುರ್ಚಿ’ ಬದಲಾವಣೆಯ ಮಹತ್ವದ ಚರ್ಚೆ ಮುನ್ನೆಲೆಗೆ ಬಂದಿದೆ.
ಅದೇನೆಂದರೆ ಮುಂದಿನ ಬಜೆಟ್ ಅನ್ನು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮಂಡಿಸಲಿದ್ದಾರೆ ಎಂಬ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಹಾಗೂ ಡಿಕೆ ಶಿವಕುಮಾರ್ ಅವರ ಪರಮಾಪ್ತ ಸಚಿನ್ ಮೀಗಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಈ ಬಾರಿ (2026-27) ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ. ಆದರೆ ಮುಂದಿನ 2027-28ನೇ ಸಾಲಿನ ಬಜೆಟ್ ಅನ್ನು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಮಂಡಿಸುತ್ತಾರೆ’ ಎಂದು ಬರೆದುಕೊಂಡಿದ್ದಾರೆ.
https://www.facebook.com/reel/2079200272870906
‘ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜನಸಾಮಾನ್ಯರ ಹಾಗೂ ರೈತ ಪರವಾದ ಬೃಹತ್ ಬಜೆಟ್ ಮಂಡನೆ ಮಾಡಲಿದ್ದಾರೆ’ ಎಂಬ ಸಂದೇಶ ನೀಡಿದ್ದು, ಮತ್ತೆ ಗುಸುಗುಸು ಶುರುವಾಗಿದೆ.
ಸಚಿನ್ ಮೀಗಾ ಅವರು ಕೇವಲ ಕಿಸಾನ್ ಘಟಕದ ಅಧ್ಯಕ್ಷರಷ್ಟೇ ಅಲ್ಲದೆ, ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಬಜೆಟ್‌ನಲ್ಲಿ ಸಿದ್ದರಾಮಯ್ಯ ಅವರು ಭರ್ಜರಿ ಕೊಡುಗೆಗಳನ್ನು ನೀಡಿ ಜನಪ್ರಿಯತೆ ಗಳಿಸುತ್ತಿರುವ ಹೊತ್ತಿನಲ್ಲೇ, ಡಿಕೆಶಿ ಬಣ ಈ ರೀತಿಯ ಪೋಸ್ಟ್ ಮಾಡುವ ಮೂಲಕ ತಮ್ಮ ನಾಯಕನೂ ರೇಸ್‌ನಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಹೊರಟಿದೆ.



