ಕಾಂಗ್ರೆಸ್​ ಸೇರಲಿದ್ದಾರೆ ಲಕ್ಷ್ಮಣ ಸವದಿ: ಡಿಕೆಶಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ಡಿಸಿಎಂ, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಇಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜೊತೆ ನಡೆದ ಸಭೆಯಲ್ಲಿ ಸವದಿ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದರು ಎನ್ನಲಾಗಿದ್ದು, ಇದಕ್ಕೆ ಕಾಂಗ್ರೆಸ್‌ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ʼಯಾವುದೇ ಷರತ್ತುಗಳಿಲ್ಲದೆ ಲಕ್ಷ್ಮಣ ಸವದಿ ಪಕ್ಷ ಸೇರುತ್ತಿದ್ದಾರೆ. ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಅವರನ್ನು ನಾವೆಲ್ಲಾ ಸ್ವಾಗಿಸುತ್ತೇವೆ. ಅವರು ಇಂದು ಸಂಜೆ 4 ಗಂಟೆಗೆ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!