ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಕಾಂಗ್ರೆಸ್ ಇಂದು ವಿಶೇಷ ಸುದ್ದಿಗೋಷ್ಟಿ ಆಯೋಜಿಸಿತ್ತು. ಅದ್ರಲ್ಲಿ ಭಾಗವಹಿಸಿದ ಕರ್ನಾಟಕದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಹಿಳೆಯರ ಓಲೈಸಲು ಭರ್ಜರಿ ಘೋಷಣೆ ಮಾಡಿದ್ದಾರೆ.
ದೆಹಲಿ ಮಹಿಳೆಯರಿಗಾಗಿ ‘ಪ್ಯಾರಿ ದೀದಿ ಯೋಜನೆ’ (Pyari Didi Yojana) ಅನೌನ್ಸ್ ಮಾಡಿದ್ದು, ಅದರ ಅಡಿಯಲ್ಲಿ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿದರು. ಕರ್ನಾಟಕದಲ್ಲಿ ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಮೊದಲ ಸಂಪುಟ ಸಭೆಯಲ್ಲಿ ಈ ಭರವಸೆಗೆ ಅನುಮೋದನೆ ನೀಡಲಾಯಿತು. ಆ ಯಶಸ್ಸಿನ ಬೆನ್ನಲ್ಲೇ ಇದೀಗ ಕಾಂಗ್ರೆಸ್ ದೆಹಲಿಯಲ್ಲೂ ಅನೌನ್ಸ್ ಮಾಡ್ತಿದೆ ಎಂದರು.