ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿ ಗಮನ ಸೆಳೆದ ಡಿಕೆ‌ ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಅಂತ ಆರ್‌ಎಸ್‌ಎಸ್‌ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಗಮನ ಸೆಳೆದಿದ್ದಾರೆ.

ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ವಿಚಾರದ ಚರ್ಚೆ ನಡೆಯುತ್ತಿತ್ತು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಉತ್ತರ ನೀಡಿದರು. ಇದೇ ವೇಳೆ ವಿಪಕ್ಷ ನಾಯಕ ಆರ್‌. ಅಶೋಕ್, ಆರ್‌​ ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಎದ್ದು ನಿಂತ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ, ಕೆಎಸ್‌ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ. ಕಪ್‌ಗೂ ಮುತ್ತು ಕೊಟ್ಟಿದ್ದೆ ಎಂದರು.

ಈ ವೇಳೆ ಆರ್‌ಎಸ್‌ಎಸ್‌ ಚಡ್ಡಿ ಹಾಕಿದ್ರಲ್ಲ ಅಂತ ಅಶೋಕ್ ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಗೀತೆಯನ್ನು ಹಾಡಿ, ಈಗ ಅದೆಲ್ಲ ಚರ್ಚೆ ಬೇಡ ಅಂತ ಟಕ್ಕರ್‌ ಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!