August 8, 2026
Saturday, August 8, 2026
spot_img

ಇಂದು ಡಿ.ಕೆ. ಶಿವಕುಮಾರ್‌ ಜತೆ ಪ್ರಮಾಣವಚನ ಸ್ವೀಕರಿಸಲಿರುವ ಸಚಿವರ ಲಿಸ್ಟ್‌ ರಿಲೀಸ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜತೆ ನಾಳೆ 10 ರಿಂದ 12 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಪಟ್ಟಿ ಇಂದು ರಿಲೀಸ್‌ ಆಗುವ ಸಾಧ್ಯತೆ ಇದೆ.

ನಾಳೆ ಸಂಜೆ .05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸುವವರ ಲಿಸ್ಟ್‌ ಹೊರಬೀಳಲಿದ್ದು, ಜನರಲ್ಲಿ ಕುತೂಹಲ ಹೆಚ್ಚಾಗಿದೆ. ಮೂಲಗಳ ಅನ್ವಯ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಂದು ಪಟ್ಟಿಯನ್ನು ತಯಾರಿಸಿ ಹೈಕಮಾಂಡ್‌ಗೆ ನೀಡಿದ್ದಾರೆ. ಈ ಜನರ ಪಟ್ಟಿಯಿಂದ ಒಟ್ಟಾರೆ 12 ಜನರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !