ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಡಿ.ಕೆ ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಡಿಕೆಶಿ ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದರು. ಅವರು ನಾಟಕ ಮಾಡದ ರಾಜಕಾರಣಿ, ನಾಟಕ ಮಾಡುವುದು ಗೊತ್ತಿಲ್ಲ. ಅವರು ಸಿಎಂ ಆದರೆ ನಮಗೆ ಸಂತೋಷವಾಗುತ್ತದೆ. ವೈಕುಂಠ ಏಕಾದಶಿಯಂದು ಅವರು ಸಿಎಂ ಆಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.