ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ.

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಭೇಟಿಯಾಗಿ ಮತ್ತೊಮ್ಮೆ ಬರ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ.

ಈ ಬೆನ್ನಲ್ಲೇ ಡಿಕೆಶಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ್ದಾರೆ, ಶೀಘ್ರವೇ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!