ʻಗಂಗಾಧರ ಅಜ್ಜನʼ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರತಿಜ್ಞಾವಿಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಡಿ.ಕೆ.ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಪ್ರತಿಜ್ಞಾವಿಧಿ ಬೋಧಿಸಿದರು.

ʻಡಿ.ಕೆ.ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವನ್ನು ಶ್ರದ್ಧಾಪೂರಕವಾಗಿ ನಿರ್ವಹಿಸುತ್ತೇನೆಂದು ಭಯ ಪಕ್ಷ ಪಾತವಿಲ್ಲದೆ ರಾಗ-ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ ಕರ್ತವ್ಯ ನಿರ್ವಹಿಸುವುದಾಗಿ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆʼ.

ʻಡಿ.ಕೆ.ಶಿವಕುಮಾರ್‌ ಆದ ನಾನು ಉಪಮುಖ್ಯಮಂತ್ರಿಯಾಗಿ ನನ್ನ ಪರ್ಯಾಲೋಚನೆಗೆ ತರಲಾಗುವ ಯಾವುದೇ ವಿಷಯವನ್ನು ಯಾವುದೇ ಸಂದರ್ಭದಲ್ಲೂ ಅನ್ಯ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಎಂದು ಗಂಗಾಧರ ಅಜ್ಜನ ಹೆಸರಿನಲ್ಲಿ ದೃಢೀಕರಣ ಮಾಡುತ್ತೇನೆʼ.

ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ಎನ್. ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!