Tuesday, May 30, 2023

Latest Posts

ರೋಡ್ ಶೋ ವೇಳೆ ಹಣ ಎಸೆದ ಡಿಕೆ ಶಿವಕುಮಾರ್: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ರೋಡ್ ಶೋ ವೇಳೆ ಜನರ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ವಿರುದ್ಧ ಬಿಜೆಪಿಯು (BJP) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ತೆರೆದ ಬಸ್​​ನಲ್ಲಿ ರೋಡ್​ಶೋ ನಡೆಸಿದ್ದ ಡಿಕೆಶಿ ಕಲಾವಿದರತ್ತ ಹಣ ಎಸೆದಿದ್ದರು. ಈ ಬಗ್ಗೆ ಬಿಜೆಪಿ ಎಂಎಲ್​ಸಿ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಒಂದು ಬದಿಯಲ್ಲಿ ಕಲಾವಿದರ ತಂಡ ವಿವಿಧ ಪ್ರದರ್ಶನಗಳನ್ನು ನಡೆಸುತ್ತಿತ್ತು. ಅವರತ್ತ ಡಿಕೆಶಿ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದಿದ್ದರು. ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!