ಲೋಕಸಭಾ ಚುನಾವಣೆ ಮುಗಿದು 15 ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಆಗ್ತಾರೆ ಸಿಎಂ: ಶಾಸಕ ಯತ್ನಾಳ್ ಹೊಸ ಬಾಂಬ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆ ಮುಕ್ತಾಯವಾದ 15 ದಿನಗಳ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಪ್ಲ್ಯಾನ್ ಹಾಕಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಒಡೆದು ಹೋಗಿ, ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಗಿದ 15 ದಿನಗಳಲ್ಲಿ ಡಿಕೆಶಿ ಸಿಎಂ ಆಗುವ ಪ್ಲಾನ್ ಹಾಕಿದ್ದಾರೆ. ಕಾಂಗ್ರೆಸ್ ಒಡೆದು ಹೋಗುತ್ತೆ, ಹೊಸ ಸರ್ಕಾರ ರಚನೆಯಾಗುತ್ತದೆ. ಸಿಎಂ ಸಿದ್ದರಾಮಯ್ಯ ಇಳಿಸೋಕೆ ಹೋದ್ರೆ ಕಾಂಗ್ರೆಸ್ ಇರದು. ಸರ್ಕಾರ ಪತನವಾಗಲಿದೆ. ಆದರೆ, ಡಿ.ಕೆ.ಶಿವಕುಮಾರ್ ಈಗಾಗಲೇ ತನ್ನ ಪರವಾಗಿರುವ ಲೋಕಸಭಾ ಸದಸ್ಯರ ಆಯ್ಕೆಗೆ ಸ್ಕೆಚ್ ಹಾಕಿದ್ದಾರೆ. ಚುನಾವಣೆ ಮುಗಿದ ಬಳಿಕ ಡಿಕೆಶಿ ಸಿಎಂ ಆಗುವ ಕನಸು ಕಾಣ್ತಿದ್ದಾರೆ. ಇದೇ ಕಾರಣಕ್ಕೆ ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೆ ಎನ್ನುವ ಸಂದೇಶ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಸಚಿವ ಶಿವಾನಂದ ಪಾಟೀಲ್ ಮಗಳನ್ನು ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ. ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನು ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನ ಜನರಿಗೆ ಡಿಕೆಶಿ ಕೊಟ್ಟಿದ್ದಾರೆ. ಮುಂದೆ ಕಾಂಗ್ರೆಸ್ ಒಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ. ಹೀಗಾಗಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪರವಾಗಿರುವ ಅಭ್ಯರ್ಥಿಗಳನ್ನ ಸೋಲಿಸಬೇಕು. ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡದೆ ಹೋದರೆ ಅವರ ಸಿಎಂ ಸ್ಥಾನ ಹೋಗೋದು ಗ್ಯಾರಂಟಿಯಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!