ಸಿದ್ದರಾಮಯ್ಯ ಅಮೃತಮಹೋತ್ಸವದಲ್ಲಿ ಕಾಂಗ್ರೆಸ್ ಏಕತೆಯ ಮಂತ್ರ ಜಪಿಸಿದ ಡಿಕೆ ಶಿವಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಏಕತೆಯ ಮಂತ್ರ ಜಪಿಸಿದ್ದು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಇದಕ್ಕಾಗಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ. ಸೋನಿಯಾ ಗಾಂಧಿ ಅವರ ಕೈ ಬಲಪಡಿಸಿ, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡೋಣ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ ಎಂದರು.

ಸಿದ್ದರಾಮಯ್ಯ ಅವರು ಕೇವಲ ಹಿಂದುಳಿದ ವರ್ಗಗಳ ನಾಯಕ ಎಂದು ಪರಿಗಣಿಸಬೇಡಿ. ಅವರು ಎಲ್ಲ ಧರ್ಮ ಹಾಗೂ ವರ್ಗಗಳ ನಾಯಕ. ರಾಜ್ಯದ ಜನರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಸಿಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ.ಇಂದು ನಾವು ನೀವೆಲ್ಲರೂ ಪುಣ್ಯವಂತರು. ಅದೇ ಕಾಲದಲ್ಲಿ ನಮ್ಮ, ನಿಮ್ಮೆಲ್ಲರ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಿಸುತ್ತಿದ್ದೇವೆ. ದೇಶಕ್ಕೂ ಸಂಭ್ರಮ, ಕಾಂಗ್ರೆಸಿಗರಿಗೂ ಸಂಭ್ರಮ, ಸಿದ್ದರಾಮಯ್ಯ ಅವರಿಗೂ ಸಂಭ್ರಮ, ನಿಮಗೆ ಹಾಗೂ ನಮಗೂ ಸಂಭ್ರಮ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!