ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಗುರುವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದಾರೆ.
ಈ ವೇಳೆ ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಕ್ರಮಗಳ ಬಗ್ಗೆ ಗಡ್ಕರಿ ಅವರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದರೊಂದಿಗೆ ನಗರದಲ್ಲಿ ಟ್ರಾಫಿಕ್ ಸಂಬಂಧಿತ ಸಮಸ್ಯೆಗಳ ಬಗ್ಗೆ ವಿವರವಾದ ವರದಿಯನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಾದ್ಯಂತ ಮೇಲ್ಸೇತುವೆ ಅಥವಾ ಸುರಂಗಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿರುವುದಾಗಿ ಉಪಮುಖ್ಯಮಂತ್ರಿತಿಳಿಸಿದರು. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬೆಂಬಲ ನೀಡಲು ಸಿದ್ಧವಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಬಿಬಿಎಂಪಿ ಆಸಕ್ತಿ ವ್ಯಕ್ತಪಡಿಸಲು (ಇಒಐ) ಕರೆ ನೀಡಿವೆ.