ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಇನ್ನೂ ರಿಲೀಫ್ ನೀಡಿಲ್ಲ, ಇವರೇ ತಗೊಂಡಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬರಬಹುದು, ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಕೇಸ್ ಮುಚ್ಚಿ ಹಾಕಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಅದು ಮುಂದೆ ಏನೇನಾಗುತ್ತೋ ನೋಡೋಣ ಎಂದರು.
ನಾನು ವಕೀಲನಾಗಿರುವುದಕ್ಕೆ ಕೇಸ್ ವಾಪಸ್ ತೆಗೆದುಕೊಂಡಿದ್ದು ಎಂಬ ಸಿಎಂ ಸಿದ್ದು ಹೇಳಿಕೆಗೆ ವ್ಯಂಗ್ಯವಾಡಿದ ಹೆಚ್ಡಿಕೆ, ಅವರು ದೊಡ್ಡ ವಕೀಲರು ಅಂತ ಗೊತ್ತು ನನಗೆ. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರಲ್ವಾ. ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೋ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು. ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ. ಆ ವಕೀಲಿಕೆಲಿಯಲ್ಲಿ ಇವರು ಬುದ್ದಿವಂತರಿದ್ದಾರೆ. ಎಸಿಬಿ (ACB) ರಚನೆ ಮಾಡಿ, ಇವರ ಮೇಲೆ ಬಂದ ಕೇಸ್ ಗಳನ್ನ ಮುಚ್ಚಿಹಾಕಿಕೊಂಡ್ರು ಎಂದು ಕಿಡಿಕಾರಿದರು.