ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯ ನಿವಾಸಕ್ಕೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಸೌಹಾರ್ದಯುತವಾಗಿ ಮಾತನಾಡಿದ್ದಾರೆ.
ಮನೆಗೆ ಬಂದ ಡಿ.ಕೆ ಶಿವಕುಮಾರ್ ಅವರಿಗೆ ಬೊಮ್ಮಾಯಿ ಹೂ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಡಿಕೆಶಿ ಬೊಮ್ಮಾಯಿ ಅವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಧನ್ಯವಾದ ತಿಳಿಸಿದ್ದಾರೆ.
ಇಬ್ಬರು ನಾಯಕರು ಹಲವು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಮುಖ್ಯವಾಗಿ ಬ್ರಾಂಡ್ ಬೆಂಗಳೂರು ಸಂಬಂಧ ಡಿ.ಕೆ ಶಿವಕುಮಾರ್ ಅವರು ಬೊಮ್ಮಾಯಿಯವರ ಬಳಿ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.