ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್: ಎಫ್​​ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದ್ದು, ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ.

ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.

ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್​ಬುಕ್, ಯೂಟ್ಯೂಬ್, ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!