ಸದ್ಯಕ್ಕೆ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸುವುದಿಲ್ಲ: ಇಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸದ್ಯ ರಿಲೀಫ್ ಸಿಕ್ಕಿದ್ದು, ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದೆಹಲಿ ಹೈಕೋರ್ಟ್‍ಗೆ ತಿಳಿಸಿದ್ದಾರೆ.

ಇಡಿಯಲ್ಲಿ ತಮ್ಮ ವಿರುದ್ಧ ದಾಖಲಾದ ದೂರು ರದ್ದುಗೊಳಿಸುವಂತೆ, ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಇದರ ವಿಚಾರಣೆ ವೇಳೆ ಅಧಿಕಾರಿಗಳು ಈ ಹೇಳಿಕೆ ದಾಖಲಿಸಿದ್ದಾರೆ.

ಇಡಿ ಪರ ವಾದ ಮಂಡಿಸಿದ ವಕೀಲರು, ಸದ್ಯಕ್ಕೆ ಡಿ.ಕೆ ಶಿವಕುಮಾರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎರಡನೇ ಪ್ರಕರಣದಲ್ಲಿ ಸಿಬಿಐ ಶಿಫಾರಸು ಆಧರಿಸಿ ದಾಖಲೆಗಳ ಪರಿಶೀಲನೆ ನಡೆದಿದೆ. ಅವರನ್ನು ಬಂಧಿಸುವ ಪ್ರಯತ್ನ ಇಡಿ ಮಾಡಿಲ್ಲ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿದೆ.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದಾಖಲಾದ ಮೊದಲ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎರಡನೇ ಕೇಸ್ ದಾಖಲಿಸಿ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ. ಇದನ್ನು ಈಗಾಗಲೇ ಸಿಬಿಐ (CBI) ತನಿಖೆ ನಡೆಸುತ್ತಿದೆ. ಈ ಮಧ್ಯೆ ಇಡಿ ಎರಡನೇ ಕೇಸ್ ದಾಖಲಿಸಿ ವಿಚಾರಣೆಗೆ ಕರೆದಿದೆ. ಇಡಿ ದಾಖಲಿಸಿರುವ ಇಸಿಐಆರ್ ರದ್ದು ಮಾಡಬೇಕು, ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!