ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನ್ಮದಿನ, ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮತ್ತು ಪತ್ರದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ದೇಶದ ಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ತಮಗೆ ದೇವರು ಸಂತೋಷ, ಆರೋಗ್ಯ, ಸುದೀರ್ಘ ಫಲಪ್ರದಾಯಕ ಜೀವನ ನೀಡಲಿ” ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಶುಭ ಹಾರೈಸಿದ್ದಾರೆ. ಇದಕ್ಕೆ ಡಿಕೆ ಶೀವಕುಮಾರ್ ಧನ್ಯವಾದ ತಿಳಿಸಿ ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
ನನ್ನ ಜನ್ಮದಿನದಂದು ನಿಮ್ಮ ಶುಭಾಶಯ ನನಗೆ ಸಂತೋಷವಾಗಿದೆ. ನಿಮ್ಮ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ, ನೀವು ನನಗೆ ಶುಭ ಹಾರೈಸಿದ್ದೀರಿ. ನಿಮ್ಮ ನಿರೀಕ್ಷೆಯಂತೆ ಜನರ ಸೇವೆಗೆ ನನ್ನ ಜೀವನವನ್ನು ಮುಡಿಪಾಗಿಡುತ್ತೇನೆ. ಇದಕ್ಕೆ ನಿಮ್ಮ ಆಶೀರ್ವಾದ ಕೇಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.