ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಗೆ ಶಾಕ್: CBI ನೋಟಿಸ್, 10 ದಿನದಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿ.ಕೆ.ಶಿವಕುಮಾರ್ (D.K.Shivakumar) ಅವರ ಪುತ್ರಿ ಐಶ್ವರ್ಯ ಗೆ (Aishwarya DK Shivakumar) ಸಿಬಿಐ (CBI) ಶಾಕ್ ಕೊಟ್ಟಿದೆ. ನೋಟಿಸ್‌ ಜಾರಿ ಮಾಡಿದ್ದೂ, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಇದೀಗ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ.

10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್‌ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!